°
, May 13, 2024 in
Breaking News
Uncategorized
0

ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಕ್ಕೆ ಹೊಸ ವಂದೇ ಭಾರತ್ ಎಕ್ಸ್ಪ್ರೆಸ್: ಸಂಸದ ನಳಿನ್ ಕುಮಾರ್ ಕಟೀಲ್ ಗೆ ರೈಲ್ವೆ ಸಚಿವರ ಭರವಸೆ

ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆ ನೀಡುವಂತೆ ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ರವರನ್ನು ಗುರುವಾರ ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ ದ.ಕ. ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ರವರಿಗೆ ಮಾನ್ಯ ರೈಲ್ವೆ ಸಚಿವರು ಹಲವು ಭರವಸೆಯನ್ನು ನೀಡಿದ್ದಾರೆ.

• ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆ ನೀಡುವುದು ಹಾಗೂ
• ಪ್ರತಿ ದಿನ ಮುಂಜಾನೆ ಸುಬ್ರಹ್ಮಣ್ಯ ರಸ್ತೆಯಿಂದ ಹೊರಟು ಮಂಗಳೂರಿಗೆ ಹಾಗೂ ಸಂಜೆ ಮಂಗಳೂರಿನಿಂದ ಸುಬ್ರಹ್ಮಣ ರಸ್ತೆಗೆ ಪ್ಯಾಸೆಂಜರ್ ರೈಲು ಒದಗಿಸುವ ಸಂಸದರ ಮನವಿಗೆ ಸಚಿವರು ಒಪ್ಪಿಗೆ ಸೂಚಿಸಿದ್ದಾರೆ.
• ರೈಲ್ವೆ ಇಲಾಖೆಯನ್ನು ಕೇರಳದ ಹಿಡಿತದಿಂದ ತಪ್ಪಿಸಲು ದಕ್ಷಿಣ ರೈಲ್ವೆಯ ಪಾಲಕ್ಕಾಡು ವಿಭಾಗದಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಭಾಗವನ್ನು ನೈರುತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಸೇರಿಸಬೇಕೆಂಬ ಮನವಿಗೆ ಮಾನ್ಯ ಸಚಿವರು ಈಗಾಗಲೇ ಈ ಕುರಿತು ಅಗತ್ಯವಾದ ಸೂಚನೆಯನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.
• ದಕ್ಷಿಣ ರೈಲ್ವೆ ಹಾಗೂ ಕೊಂಕಣ ರೈಲ್ವೆಗಳ ವಿಭಾಗಳ ನಡುವೆ ಸಂಚರಿಸುವ ರೈಲುಗಳ ಅನಗತ್ಯವಿಳಂಭವದ ನಿವಾರಣೆಯ ಬಗ್ಗೆ ದ.ಕ. ಸಂಸದರು ರೈಲ್ಮವೆ ಸಚಿವರ ಗಮನ ಸೆಳೆದಾಗ ಈ ಕುರಿತು ಅನಗತ್ಯ ವಿಳಂಭವನ್ನು ನಿವಾರಣೆ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ರೈಲ್ವೆ ಸಚಿವರು ಸೂಚಿಸಿದ್ದಾರೆ.

Leave a Reply

Your email address will not be published. Required fields are marked *