°
, May 20, 2024 in
Breaking News
PoliticsTop Stories
0

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅಧಿಕಾರ ಸ್ವೀಕಾರ

ಬೆಂಗಳೂರು : ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಯಡಿಯೂರಪ್ಪನವರ ಪುತ್ರ ಹಾಗೂ ಶಾಸಕರಾದಂತಹ ಬಿ.ವೈ ವಿಜಯೇಂದ್ರರವರು ಇಂದು ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.

ಇಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಿರ್ಗಮಿತ ಅಧ್ಯಕ್ಷರಾದಂತಹ ಶ್ರೀ ನಳಿನ್ ಕುಮಾರ್ ಕಟೀಲ್‌ರವರು ವಿಜಯೇಂದ್ರರವರಿಗೆ ಅಧಿಕಾರ ಹಸ್ತಾಂತರಿಸಿದರು.
ಪದಗ್ರಹಣ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದಗೌಡ, ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಮಂದಿ ಗಣ್ಯರು ನಾಯಕರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *