ಮಂಗಳೂರು – ಮಡ್ಗಾಂವ್ ವಂದೇ ಭಾರತ್ ರೈಲು ಪರೀಕ್ಷಾರ್ಥ ಸಂಚಾರಕ್ಕೆ ಚಾಲನೆ
ಮಂಗಳೂರು, ಡಿ 26: ಕರಾವಳಿ ಜನರ ನಿರೀಕ್ಷೆಯ ಮಂಗಳೂರು – ಮಡ್ಗಾಂವ್ ವಂದೇ ಭಾರತ್ ರೈಲು ಪರೀಕ್ಷಾರ್ಥ ಸಂಚಾರಕ್ಕೆ ಮಂಗಳೂರು ಸೆಂಟ್ರಲ್ ನಿಲ್ದಾಣದಲ್ಲಿ ಚಾಲನೆ ಸಿಕ್ಕಿದ್ದು, ಈ ವೇಳೆ ಸಂಸದ ನಳಿನ್ ಕುಮಾರ್ ಕಟೀಲ್ , ಸ್ಥಳೀಯ ಶಾಸಕರು ಹಾಗೂ ರೈಲ್ವೇ ಅಧಿಕಾರಿಗಳು ಉಪಸ್ಥಿತರಿದ್ದರು.